ಬೆಂಗಳೂರು: ರಾಜ್ಯದಲ್ಲಿ ಕಳೆದ ದಿನಗಳಿಂದ ಬಾರಿ ಸದ್ದು ಮಾಡಿದ್ದ ಪೆನ್‌ಡ್ರೈವ್ ಕೇಸ್‌ನಲ್ಲಿ ಮತ್ತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ ಪಡೆಯಲಾಗಿದೆ.ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೆ.ಅರ್.ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಜೂನ್ 24ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.
Ad
ಕೆ.ಅರ್.ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಸ್ಥಳ ಮಹಜರು, ಹೇಳಿಕೆ ದಾಖಲು, ವಾಯ್ಸ್ ಸ್ಯಾಂಪಲ್, ವೈದ್ಯಕೀಯ ಪರೀಕ್ಷೆ ಸಲುವಾಗಿ ಕಸ್ಟಡಿಗೆ ನೀಡಲಾಗಿದೆ. ನೆನ್ನೆಯಷ್ಟೇ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು. ಆದರೆ, 3ನೇ ಕೇಸ್‌ನಲ್ಲಿ ವಿಚಾರಣೆ ನಡೆಸಲು ತನಿಖಾಧಿಕಾರಿಗಳು ಬಾಡಿ ವಾರಂಟ್ ಮೇಲೆ ಮತ್ತೆ ಎಸ್ಐಟಿ ಕಸ್ಟಡಿಗೆ ಪಡೆದಿದ್ದಾರೆ.
Ad
Ad