ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ.
ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಇದರಿಂದ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದ್ದು, ಹೈಕೋರ್ಟ್ ಮೆಟ್ಟಿಲೇರುವ ಅನಿವಾರ್ಯತೆ ಎದುರಾಗಿದೆ. ಸಹೋದರ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.
ಅಸಹಜ ಲೈಂಗಿಕ ದೌರ್ಜನ್ಯದಲ್ಲಿ ಜೈಲು ಪಾಲಾಗಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು, ಅವರು ನಿನ್ನೆ (ಜುಲೈ 23) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆದರೆ, ಸಹೋದರ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.

