Ad

ಅತ್ಯಾಚಾರ ಕೇಸ್‌ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2 ವಾರ ಮುಂದೂಡಿಕೆ

ಅತ್ಯಾಚಾರ ಕೇಸ್‌ ನಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಬೆಂಗಳೂರು: ಅತ್ಯಾಚಾರ ಕೇಸ್‌ ನಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

Ad
300x250 2

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.

Ad
Ad
Nk Channel Final 21 09 2023
Ad