Bengaluru 23°C
Ad

ಪ್ರಜ್ವಲ್​​ ರೇವಣ್ಣಗೆ ಜೈಲೇ ಗತಿ; ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

New Project (39)

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್​​ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಿ ಆದೇಶಿಸಿದೆ.

ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು ಈ ಆದೇಶ ನೀಡಿದೆ.ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​​​ನಲ್ಲಿ ಪ್ರಜ್ವಲ್​​ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದಲ್ಲದೇ ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲೂ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿಯೂ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಕೋರ್ಟ್​​​​ ಮುಂದೂಡಿದೆ.

Ad
Ad
Nk Channel Final 21 09 2023