Bengaluru 22°C
Ad

ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಬೆಂಗಳೂರಿನತ್ತ ಹೊರಟ ಪ್ರಜ್ವಲ್​ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರೋ ಪ್ರಜ್ವಲ್ ರೇವಣ್ಣಗೆ ವಿದೇಶದಲ್ಲಿದ್ದಾಗ ಗರ್ಲ್‍ಫ್ರೆಂಡ್ ಸಹಾಯ ಮಾಡಿದ್ದಾರೆ ಅನ್ನೋ ಮಾಹಿತಿ ಬಹಿರಂಗವಾಗಿದೆ.

ಬೆಂಗಳೂರು: ಪೆನ್ ಡ್ರೈವ್ ಪ್ರಕಣದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್​ ರೇವಣ್ಣ LH764 ವಿಮಾನ ಮ್ಯೂನಿಕ್‌ ಏರ್‌ಪೋರ್ಟ್‌ನಿಂದ ಟೇಕಾಫ್ ಆಗಿದ್ದು, ಕೊನೆಗೂ ಬೆಂಗಳೂರಿನತ್ತ ಹೊರಟಿದ್ದಾರೆ.

ಲಗೇಜ್ ಚೆಕ್ ಇನ್ ಮಾಡಿಸಿರುವ ಪ್ರಜ್ವಲ್​, ಬ್ಯುಸಿನೆಸ್​​ ಕ್ಲಾಸ್​​ ಪ್ರಯಾಣಿಕರ ಜೊತೆ ಕುಳಿತುಕೊಂಡಿದ್ದಾರೆ. ಪ್ರಜ್ವಲ್‌ ರೇವಣ್ಣ 4 ಬ್ಯಾಗ್ ತಂದಿರುವ ಮಾಹಿತಿ ಇದೆ. ಕೆಂಪೇಗೌಡ ಏರ್‌ಪೋರ್ಟ್‌ಗೆ ಮಧ್ಯರಾತ್ರಿ ಆಗಮಿಸಲಿದ್ದಾರೆ.

ಲುಫ್ತಾನ್ಸಾ ಏರ್​​ಲೈನ್ಸ್ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಆಗಿತ್ತು. ಇದೀಗ ಬೆಂಗಳೂರಿನತ್ತ ಹೊರಟಿದ್ದಾರೆ.

ಎಸ್​ಐಟಿ ಯೂರೋಪ್​​ನ ಹಂಗೇರಿಯ ಬುಡಾಪೆಸ್ಟ್​​ನಿಂದ  31 ದಿನಗಳ ಬಳಿಕ ವಿಡಿಯೋ ಮಾಡಿ ಮೇ 31 ರಂದು ನಾನು ಎಸ್​ಐಟಿ ಮುಂದೆ ಹಾಜರಾಗುತ್ತೇನೆ ಎಂದು ಹೇಳಿದ್ದರು. ಮೊಬೈಲ್ ಐಪಿ ಅಡ್ರೆಸ್ ಟ್ರೇಸ್ ಮಾಡಿದಾಗ ಆತ 2 ದಿನ ಮೊದಲೇ ವಿಡಿಯೋ ರೆಕಾರ್ಡ್​ ಮಾಡಿಟ್ಟುಕೊಂಡು ಬಳಿಕ ರಿಲೀಸ್ ಮಾಡಿರುವುದು ಗೊತ್ತಾಗಿತ್ತು.

Ad
Ad
Nk Channel Final 21 09 2023
Ad