ಬೆಂಗಳೂರು : ಮಹಿಳೆಯರು ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಪ್ರಕರಣದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೆರದುಕೊಂಡು ಬರಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಅವರನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ 4ನೇ ಮಹಡಿಯಲ್ಲಿನ 42 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುತ್ತದೆ.
ಕೇಸಿನ ಡೈರಿಗಾಗಿ ಕಾಯಲಾಗುತ್ತಿದ್ದು, ಅವರನ್ನು ಮಧ್ಯಾಹ್ನ 3 ಗಂಟೆಗೆ ನ್ಯಾಯಧೀಶರು ಎಸ್‌ಐಟಿಯ ಪ್ರಾಥಮಿಕ ಮನವಿಯನ್ನು ವಿಚಾರಣೆ ನಡೆಸಲಿದ್ದಾರೆ.
ಇಂದು ವಿಮಾನ ದಿಂದ ಇಳಿಯುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ನೇರವಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೆರದುಕೊಂಡು ಬರಲಾಗಿದೆ.

