News Karnataka Kannada
Saturday, May 18 2024
ಬೆಂಗಳೂರು

ಅಶ್ಲೀಲ ವಿಡಿಯೋ ಪ್ರಕರಣ : ಜೆಡಿಎಸ್​ನಿಂದ ಪ್ರಜ್ವಲ್ ರೇವಣ್ಣ​​ ಅಮಾನತು

ಅಶ್ಲೀಲ ವಿಡಿಯೋ ಬಹಿರಂಗ ವಿಚಾರವಾಗಿ ಹಾಸನ ಜೆಡಿಎಸ್‌ ಕಠಿಣ ಕ್ರಮವನ್ನು ತೆಗೆದುಕೊಂಡಿದೆ.
Photo Credit : NewsKarnataka

ಬೆಂಗಳೂರು : ಅಶ್ಲೀಲ ವಿಡಿಯೋ ಬಹಿರಂಗ ವಿಚಾರವಾಗಿ ಹಾಸನ ಜೆಡಿಎಸ್‌ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಪಕ್ಷದ ಕೋರ್ ಕಮಿಟಿ ಸಭೆಯ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅಮಾನತು ನಿರ್ಧಾರ ಪ್ರಕಟಿಸಿದ್ದು, ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಪ್ರಜ್ವಲ್​ ಅಮಾನತು ಮಾಡಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆಆರ್ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಅಶ್ಲೀಲ ವಿಡಿಯೋ ಸಂಬಂಧ ಈಗಾಗಲೇ ರಾಜ್ಯ ಸರ್ಕಾಟ ಎಸ್​ಐಟಿ ರಚನೆ ಮಾಡಿದ್ದು, ತನಿಖೆ ಪ್ರಗತಿಯಲ್ಲಿದೆ. ಈ ಮಧ್ಯೆ, ಪ್ರಕರಣದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸುವಂತೆ ಕರ್ನಾಟಕ ಡಿಜಿ-ಐಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ನೀಡಿದೆ.​

ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆಗೆ ಸೈಬರ್​ ಕ್ರೈಂ ವಿಭಾಗಕ್ಕೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ವಿಡಿಯೋಗಳು ವೈರಲ್ ಆಗದಂತೆ ತಡೆಯಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ರಕ್ಷಣೆ ವಿಚಾರವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಯೋಗ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು