ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮಾರಾಟ ದಂಧೆ ಶುರುವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಫೋಟೋದೊಂದಿಗೆ ವಿಡಿಯೋ ಬೇಕೇ? ಎಂಬ ಪೋಸ್ಟರ್ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬೇಕಾ? ಡಿಎಂ ಮಾಡಿ. ಡಿಎಂ ಮಾಡುವುದರ ಜೊತೆಗೆ ಪೇಜ್ ಲೈಕ್ ಮಾಡಿ ಎಂದು ಪೋಸ್ಟರ್ ಹಾಕಲಾಗಿದೆ.
ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳನ್ನು ಹಂಚಿಕೆ ಮಾಡಲು ಕಿಡಿಗೇಡಿಗಳು ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಹಾಸನದಲ್ಲಿ ವಿಡಿಯೋ ಹಂಚಿಕೊಳ್ಳಲು ಬಸ್ ಸ್ಟಾಪ್ ಇತರೆಡೆ ಪೆನ್‌ಡ್ರೈವ್ಗಳನ್ನು ಹಂಚಿಕೊಳ್ಳಲಾಗಿತ್ತು. ವಿಡಿಯೋದಲ್ಲಿ ಇರುವ ಮಹಿಳೆಯರ ಮುಖ ಕೂಡ ನೇರವಾಗಿ ತೋರಿಸಲಾಗಿತ್ತು.
ವಿಡಿಯೋ ವೈರಲ್ ಆದ ಬಳಿಕ ಅದೆಷ್ಟೋ ಮಹಿಳೆಯರು ಛೀಮಾರಿ ಹಾಕಿಸಿಕೊಂಡು ಆತ್ಮಹತ್ಯೆಗೂ ಯತ್ನಿಸಿದ್ದರು. ಇದೇ ವಿಡಿಯೋಗಳನ್ನು ಇಟ್ಟುಕೊಂಡು ಕೆಲ ಕಿಡಿಗೇಡಿಗಳು ದಂಧೆಗಿಳಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೇರವಾಗಿ ‘ಪ್ರಜ್ವಲ್ ವಿಡಿಯೋ ಬೇಕಾ?’ ಎಂಬ ಪೋಸ್ಟರ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಈಗಾಗಲೆ ಎಸ್‌ಐಟಿ ವಿಡಿಯೋಗಳನ್ನ ಶೇರ್ ಮಾಡದಂತೆ ಸುತ್ತೋಲೆ ಹೊರಡಿಸಿದೆ. ಆದರೂ ವಿಡಿಯೋಗಳನ್ನ ಹಣಕ್ಕಾಗಿ, ಲೈಕ್ ಗಾಗಿ ಬಳಕೆ ಮಾಡಲಾಗುತ್ತಿದ್ದು ಈ ಬಗ್ಗೆ ಆದಷ್ಟು ಬೇಗ ಗಮನ ಹರಿಸಿ ಆರೋಪಿಗಳನ್ನು ಬಂಧಿಸುವಂತೆ ಸಾರ್ವಜನಿಕ ಕೂಗು ಕೇಳಿ ಬಂದಿದೆ.
ಪ್ರಜ್ವಲ್ ವಿಡಿಯೋ ಪಡೆಯಲು ಕೆಲವರು ಮುಗಿಬಿದ್ದು ವಿಡಿಯೋ ಪಡೆಯುತ್ತಿದ್ದಾರೆ ಎಂದು ಕೆಲ ಮೂಲಗಳು ತಿಳಿಸಿವೆ.