‘ವಿಶಾಲ ವಿಶ್ವದ ವಿಸ್ಮಯಗಳನ್ನು ಅರಿಯಲು ಸಂಭ್ರಮಿಸಲು ಇದು ದಾರಿಯಾಗಲಿ’: ಪ್ರಕಾಶ್ ರಾಜ್

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಹುದೊಡ್ಡ ಸಾಧನೆ ಮಾಡಿದೆ. ‘ಚಂದ್ರಯಾನ 3’ ಮಿಷನ್ ಯಶಸ್ವಿಯಾಗಿಸಿದೆ. ಈ ಹೆಮ್ಮೆಯ ಕ್ಷಣವನ್ನು ಎಲ್ಲರೂ ಸಂಭ್ರಮಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ನಟ ಪ್ರಕಾಶ್ ರಾಜ್ ಕೂಡ ಈ ಬಗ್ಗೆ ಸಂತೋಷ ವ್ಯಕ್ಯಪಡಿಸಿದ್ದಾರೆ. ಕೆಲವರು ಅವರನ್ನು ಟೀಕಿಸಿದ್ದಾರೆ.

‘ಭಾರತದ, ಮನುಕುಲದ ಹೆಮ್ಮೆಯ ಕ್ಷಣಗಳಿವು. ಇಸ್ರೋ, ಚಂದ್ರಯಾನ 3 ಹಾಗೂ ವಿಕ್ರಮ್ ಲ್ಯಾಂಡರ್​ಗೆ ಹಾಗೂ ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಧನ್ಯವಾದಗಳು. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು ಇದು ದಾರಿಯಾಗಲಿ’ ಎಂದು ಪ್ರಕಾಶ್ ರಾಜ್ ಎಕ್ಸ್ ನಲ್ಲಿ ಬೆರೆದುಕೊಂಡಿದ್ದಾರೆ.

ಆದರೆ ಇದನ್ನು ಅನೇಕರು ಟೀಕಿಸಿದ್ದಾರೆ. ‘ನಿಮ್ಮನ್ನು ಯಾರೂ ಕ್ಷಮಿಸುವುದಿಲ್ಲ. ನಿಮ್ಮ ಸ್ಪಷ್ಟನೆಯನ್ನೂ ನಾವು ಒಪ್ಪುವುದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಕೆಲವರು ಪ್ರಕಾಶ್ ಅವರನ್ನು ಕಪಟಿ ಎಂದು ಕರೆದಿದ್ದಾರೆ.

ಪ್ರಕಾಶ್ ರಾಜ್ ಅವರು ಇತ್ತೀಚೆಗೆ ಕಾರ್ಟೂನ್ ಒಂದನ್ನು ಹಂಚಿಕೊಂಡಿದ್ದರು. ಚಂದ್ರನ ಮೇಲೆ ವ್ಯಕ್ತಿಯೋರ್ವ ಚಹಾ ಮಾರುವ ರೀತಿಯಲ್ಲಿ ಈ ಕಾರ್ಟೂನ್ ಇತ್ತು. ‘ಚಂದ್ರಯಾನ 3’ ಯೋಜನೆಯನ್ನು ಪ್ರಕಾಶ್ ರೈ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟರು.

 

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago