News Karnataka Kannada
Monday, May 06 2024
ಬೆಂಗಳೂರು

ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್​: ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

Praveen Nettaru murder case: Court rejects bail plea of accused
Photo Credit : News Kannada

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು