ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ, ನ್ಯಾ. ಅನಿಲ್ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಕ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.
2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…
ರಾಜ್ಯ ಬಿಜೆಪಿ ಉಪಾಧ್ಯಕ್ಷ, ನಟಿ, ಮಾಳವಿಕಾ ಅವಿನಾಶ್ ಅವರ ತಂದೆ ನಟೇಶನ್ ಗಣೇಶನ್ ಅವರು ನಿಧನರಾಗಿದ್ದಾರೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…