ಬೆಂಗಳೂರು:  ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್​ಸಿ)ದ ನೂತನ ಅಧ್ಯಕ್ಷರಾಗಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು.

ಪ್ರೀತಿ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಅವರು 2022 ರಿಂದ UPSC ಸದಸ್ಯರಾಗಿದ್ದಾರೆ. ಪೂಜಾ ಖೇಡ್ಕರ್ ವಿವಾದ ಬೆಳಕಿಗೆ ಬಂದ ನಂತರ, UPSC ಮಾಜಿ ಮುಖ್ಯಸ್ಥ ಮಹೇಶ್ ಸೋನಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು.