ಬೆಂಗಳೂರು: ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಂದಿದೆ. ಇವರು ಅತ್ಯಂತ ಕಿರಿಯ ವಯಸ್ಸಿಗೆ ತಮ್ಮ ಜೀವ ಕಳೆದುಕೊಂಡಿದ್ದಾರೆ.

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಇವರು ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.