ಬೆಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಹಾಲು ಒಕ್ಕೂಟ ಸೆಪ್ಟೆಂಬರ್ 22 ರಿಂದ ನಂದಿನಿ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ.
ನಂದಿನಿ ಹಾಲು, ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಯಾಗಿದ್ದು, ಸೋಮವಾರದಿಂದ ಎಂದರೆ ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ. ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶವನ್ನು ಇನ್ನಷ್ಟೇ ನೀಡಬೇಕಿದೆ.
ಜಿಎಸ್ಟಿ ಇಳಿಕೆ ಬೆನ್ನಲ್ಲೇ ಶುಕ್ರವಾರ ಕೆಎಂಎಫ್ ಅಧಿಕಾರಿಗಳು ಸಭೆ ನಡೆಸಿ ಹಾಲು ಉತ್ಪನ್ನಗಳ ದರ ಇಳಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಯಾವ ಉತ್ಪನ್ನಗಳ ದರ ಎಷ್ಟು ಇಳಿಕೆ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸಲಾಗಿದೆ. ಮೊಸರಿನ ದರ ಲೀಟರ್ಗೆ 4 ರೂ. ಇಳಿಕೆಯಾಗುವ ನಿರೀಕ್ಷೆ ಇದೆ. ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆ ಆಗಲಿದೆ ಎನ್ನಲಾಗಿದೆ.

