News Karnataka Kannada
Friday, May 03 2024
ಬೆಂಗಳೂರು

ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ  ಮೃತಪಟ್ಟ ಘಟನೆ ತುಮಕೂರು ರಸ್ತೆಯ ರಾಕ್ ಲೈನ್ ಮಾಲ್ ಮುಂಭಾಗದಲ್ಲಿ ನಡೆದಿದೆ. 
Photo Credit : NewsKarnataka

ಬೆಂಗಳೂರು: ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ  ಮೃತಪಟ್ಟ ಘಟನೆ ತುಮಕೂರು ರಸ್ತೆಯ ರಾಕ್ ಲೈನ್ ಮಾಲ್ ಮುಂಭಾಗದಲ್ಲಿ ನಡೆದಿದೆ.

ಯೋಗೇಶ್ (21) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ಖಾಸಗಿ ಬಸ್‌ ತುಮಕೂರು ಕಡೆಯಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಸ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಬೈಕ್ ಸವಾರ ಯೋಗೇಶ್‌ ಮೇಲೆ ಬಸ್‌ ಹರಿದಿದೆ. ಯೋಗೇಶ್‌ ತಲೆಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು