Bengaluru 21°C
Ad

ಪೆಟ್ರೋಲ್​, ಡೀಸೆಲ್ ಬೆಲೆ ಇಳಿಸದಿದ್ದರೆ ಪ್ರತಿಭಟನೆ ಖಂಡಿತ : ಖಾಸಗಿ ಸಾರಿಗೆ ಒಕ್ಕೂಟ

ಪೆಟ್ರೋಲ್​, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸುತ್ತೇವೆ. ಪೆಟ್ರೋಲ್, ಡೀಸೆಲ್ ದರ ಇಳಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ನಟರಾಜ್ ಶರ್ಮ ಹೇಳಿದರು.

ಬೆಂಗಳೂರು:  ಪೆಟ್ರೋಲ್​, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸುತ್ತೇವೆ. ಪೆಟ್ರೋಲ್, ಡೀಸೆಲ್ ದರ ಇಳಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ನಟರಾಜ್ ಶರ್ಮ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೆಟ್ರೋಲ್ ದರ ಇಳಿಸದಿದ್ದರೆ ಮೊದಲು ಬೆಂಗಳೂರು ಬಂದ್​ ಮಾಡುತ್ತೇವೆ. ನಂತರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಶಕ್ತಿ ಯೋಜನೆಯನ್ನು ಸರ್ಕಾರ ಕೈಬಿಡಲಿಲ್ಲ ಅಂದರೆ ದೊಡ್ಡ ಮಟ್ಟದಲ್ಲಿ ನಮಗೆ ಹೊಡೆತ ಬೀಳುತ್ತದೆ. ಖಾಸಗಿ ಸಾರಿಗೆ ಉದ್ಯಮ ನಶಿಸಿ ಹೋಗುವಂತ ಸಂದರ್ಭದಲ್ಲಿ ಕೊನೆಯ ಮೊಳೆ ಹೊಡೆಯಲು ಸರ್ಕಾರ ಮುಂದಾಗಿದೆ ಎಂದು ವಾಗ್ದಾಳಿ ಮಾಡಿದರು.

Ad
Ad
Nk Channel Final 21 09 2023
Ad