ನೇಹಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಳೆ ರಾಜ್ಯದಾದ್ಯಂತ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಮತ್ತು ಹಿಂದೂಗಳ ಮೇಲಿನ ಮುಸ್ಲಿಂ ಮತಾಂಧರ ನಿರಂತರ ದಾಳಿಯ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

ಈ ಕುರಿತು ‘ಎಕ್ಸ್‌’ ಮೂಲಕ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿರುವ ಅವರು, ‘ನಮ್ಮ ಆದ್ಯತೆ ಏನಿದ್ದರೂ ‘ಧ್ಯೇಯ’ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ನಾಳೆ ಎಲ್ಲರೂ ಬೀದಿಗಿಳಿದು ಹೋರಾಟ ನಡೆಸಬೇಕು’ ಎಂದು ಹೇಳಿದ್ದಾರೆ.

ಚುನಾವಣೆಯ ಅವಸರದಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ. ಆದರೆ, ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆತಿರುವುದು ಸ್ಪಷ್ಟವಾಗಿದೆ’ ಎಂದು ವಿಜಯೇಂದ್ರ ಹೇಳಿದ್ದಾರೆ.

 

Chaitra Kulal

Recent Posts

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

16 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

30 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

47 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

1 hour ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

2 hours ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

2 hours ago