News Karnataka Kannada
Monday, May 20 2024
ಬೆಂಗಳೂರು

ಗೃಹ ಕಚೇರಿ ಮುಂದೆ ಪಿಎಸ್‌ಐ ಪರೀಕ್ಷಾರ್ಥಿಗಳ ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು

Photo Credit : News Kannada

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ವೇಳೆ ಅವರಿಗೆ ಮನವಿ ನೀಡಲು ಮನವಿ ಪತ್ರದೊಂದಿಗೆ PSI ಪರೀಕ್ಷಾರ್ಥಿಗಳು ಆಗಮಿಸಿದ್ದರು. ಈ ವೇಳೆ ಗೃಹ ಕಚೇರಿ ಮುಂದೆ ಡಿಸೆಂಬರ್ 23ರಂದು 545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ವಿಚಾರವಾಗಿ ಪ್ರತಿಭಟನೆ ಮಾಡಿದ ಪಿಎಸ್​ಐ ಪರೀಕ್ಷಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಈ‌ ಸರ್ಕಾರ ಅಧಿಕಾರಕ್ಕೆ ಬರಲು ನಮ್ಮ ಪಾತ್ರ ದೊಡ್ಡದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಗೆ ಕೇವಲ 30 ದಿನಗಳ ಕಾಲಾವಕಾಶ ನೀಡಿದ್ದಾರೆ. ಕನಿಷ್ಠ 2 ತಿಂಗಳು ಕಾಲಾವಕಾಶ ನೀಡಬೇಕೆಂದು ಪರೀಕ್ಷಾರ್ಥಿಗಳು ಹೇಳಿದ್ದಾರೆ.

ಡಿ. 23ಕ್ಕೆ ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ದಿನಾಂಕ ನಿಗದಿ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಏಕಾಏಕಿ ದಿನಾಂಕ ನಿಗದಿ ಸರಿಯಲ್ಲ. 3 ತಿಂಗಳು ಕಾಲಾವಕಾಶ ಕೊಡುವಂತೆ ಆಗ್ರಹಿಸಿದ್ದರು. ಪರೀಕ್ಷೆಗೆ ಸಂಬಂಧಿಸಿ ಸಾಕಷ್ಟು ಗೊಂದಲಗಳಿವೆ. ಅವು ಮೊದಲು ಪರಿಹಾರ ಆಗಬೇಕು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು