ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ 2021ರ ಅಕ್ಟೋಬರ್ 3ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ವೇಳೆ ಅಕ್ರಮ ಕಂಡುಬಂದಿತ್ತು. ಈ ಕಾರಣಕ್ಕೆ ಪರೀಕ್ಷೆ ರದ್ದಾಗಿತ್ತು. ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ಪಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳು, ಅವರ ಕೆಲವು ಪಾಲಕರನ್ನು ಸಹ ಬಂಧಿಸಲಾಗಿತ್ತು. ಡಿ.23ರಂದು ಮರು ಪರೀಕ್ಷೆ ನಿಗದಿಯಾಗಿತ್ತು. ಆದರೆ ಇದೀಗ 545 ಪಿಎಸ್ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು 2024ರ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.