ಬೆಂಗಳೂರು : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾ. 1ರಿಂದ 20ರವರೆಗೆ ನಡೆದಿದ್ದು, ಇಂದು (ಎ. 8) ಫಲಿತಾಂಶ ಪ್ರಕಟಗೊಂಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಉಡುಪಿ ಜಿಲ್ಲೆ (93.90%) ಪ್ರಥಮ ಮತ್ತು ದಕ್ಷಿಣ ಕನ್ನಡ (93.57%) ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ದಕ್ಷಿಣ (85.36%) ತೃತೀಯ ಸ್ಥಾನ ಪಡೆದಿದೆ. ಯಾದಗಿರಿ (48.45)ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.