ಬೆಂಗಳೂರು: ಬೆಂಗಳೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮುಂದಿನ 2 ವರ್ಷಗಳಲ್ಲಿ 5 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಂದಿನ ಎರಡು ವರ್ಷಗಳಲ್ಲಿ 5 ಸಾವಿರ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲಿದ್ದೇವೆ. ಇದರಿಂದ ಇಂಗಾಲ ಹೊರಸೂಸುವಿಕೆ ಕಡಿಮೆಯಾಗಿ ಬೆಂಗಳೂರು ನಗರಗಳ ನಿವಾಸಿಗರಿಗೆ ಉತ್ತಮ ಗಾಳಿ ಲಭಿಸಿ ಜೀವನದ ಗುಣಮಟ್ಟ ಸುಧಾರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಇನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಿಎಂಟಿಸಿ ಬಳಿ ಇರುವ ಎಲೆಕ್ಟ್ರಿಕ್ ಬಸ್ಗಳ ಸಂಖ್ಯೆ ಸಾವಿರದ ಗಡಿ ದಾಟಿವೆ. ಸದ್ಯ ಬಿಎಂಟಿಸಿ ಬಳಿ ಇರುವ ಎಲೆಕ್ಟ್ರಿಕ್ ಬಸ್ಗಳ ಸಂಖ್ಯೆ 1,027 ತಲುಪಿದ್ದು, ಈ ಮೂಲಕ ಸಂಸ್ಥೆ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಮೂಲಗಳ ಪ್ರಕಾರ, 2025 ರ ವೇಳೆಗೆ ಎಲೆಕ್ಟ್ರಿಕ್ ಬಸ್ಗಳ ಸಂಖ್ಯೆ ಸುಮಾರು 5,000 ತಲುಪಲಿದೆ.
Ad