News Karnataka Kannada
Monday, April 22 2024
Cricket
ಬೆಂಗಳೂರು

ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಆರ್‌.ಅಶೋಕ್‌

ಇದುವರೆಗಿನ ಮುಖ್ಯಮಂತ್ರಿಗಳಲ್ಲಿ ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ವಿರೋಧ ಪಕ್ಷದ ನಾಯಕ ಅಶೋಕ್‌ ವ್ಯಂಗ್ಯವಾಡಿದ್ದಾರೆ.
Photo Credit : NewsKarnataka

ಬೆಂಗಳೂರು:  ಇದುವರೆಗಿನ ಮುಖ್ಯಮಂತ್ರಿಗಳಲ್ಲಿ ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ವಿರೋಧ ಪಕ್ಷದ ನಾಯಕ ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಇವರು ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ, ಸಿಎಂ ಸಿದ್ಧರಾಮಯ್ಯ ನವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು. ಬಿ ಕೆ ಹರಿಪ್ರಸಾದ್‌ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು ಎಂದು ಟೀಕಿಸಿದ್ದಾರೆ.

ಡಿಸಿಎಂ ಡಿಕೆಶಿ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ ಎಕ್ಸ್‌ಪೈರಿ ಡೇಟ್‌ ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು. ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ ಎಂದು ಹೇಳಿದ್ದಾರೆ

ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ.
ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು ಎಂದು ಸವಾಲ್‌ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು