ಬೆಂಗಳೂರು: ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ನರೇಂದ್ರ ಮೋದಿ ಅವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದರು.
ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ.
ರಾಹುಲ್ ಗಾಂಧಿ ಯವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ನಾನು ಅವರಿಗೆ ತುಂಬಿ ಹೃದಯದ ಅಭಿನಂದನೆಗಳನ್ನು ತಿಳಿಸಬಯಸುತ್ತೇನೆ ಎಂದು ತಿಳಿಸಿದರು.

