Bengaluru 23°C

ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ತೀವ್ರ ಚಳಿಯ ನಡುವೆ ಮತ್ತೆ ಮಳೆಯ ಮುನ್ಸೂಚನೆ

ಕಳೆದ ವಾರವಷ್ಟೇ ಫೆಂಗಲ್ ಸೈಕ್ಲೋನ್ ನಿಂದ ಕಂಗೆಟ್ಟಿದ್ದ ದಕ್ಷಿಣ ಭಾರತದ ರಾಜ್ಯಗಳಿಗೆ ಇದೀಗ ಮತ್ತೆ ವರುಣಾಘಾತ ಎದುರಾಗುವ ಸಾಧ್ಯತೆ ಇದೆ.

ಬೆಂಗಳೂರು : ಕಳೆದ ವಾರವಷ್ಟೇ ಫೆಂಗಲ್ ಸೈಕ್ಲೋನ್ ನಿಂದ ಕಂಗೆಟ್ಟಿದ್ದ ದಕ್ಷಿಣ ಭಾರತದ ರಾಜ್ಯಗಳಿಗೆ ಇದೀಗ ಮತ್ತೆ ವರುಣಾಘಾತ ಎದುರಾಗುವ ಸಾಧ್ಯತೆ ಇದೆ.


ಕರ್ನಾಟಕ, ತಮಿಳುನಾಡು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ಚಳಿಯ ನಡುವೆ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನ ಭಾರತೀಯ ಹವಾಮಾನ ಇಲಾಖೆ ನೀಡಿದೆ.


ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದೇಶದ 7 ರಾಜ್ಯಗಳಲ್ಲಿ ಇನ್ನು 2-3 ದಿನಗಳಲ್ಲಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಚಳಿ ಹೆಚ್ಚಾಗಲಿದೆ. ಗುಡ್ಡಗಾಡು ರಾಜ್ಯಗಳಲ್ಲಿ ಹಿಮಪಾತವು ಚಳಿಯ ತೀವ್ರತೆಯನ್ನು ಹೆಚ್ಚಿಸಬಹುದು. ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಮತ್ತು ಕೆಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಬೀಳಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮತ್ತೊಂದು ಸೈಕ್ಲೋನ್ ಸೃಷ್ಟಿಯಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಡಿಸೆಂಬರ್ 12 ರಿಂದ 2-3 ದಿನ ಮಳೆ ರಗಳೆ ಶುರುವಾಗಲಿದೆ ಎಂದು ಅಂದಾಜಿಸಲಾಗಿದೆ.ಕರ್ನಾಟಕ, ಪುದುಚೇರಿ, ಕೇರಳ, ಆಂಧ್ರಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.


ಇನ್ನು ಉತ್ತರ ಭಾರತದ ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಬೆಳಗ್ಗೆ ಮತ್ತು ಸಂಜೆ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಜಾರ್ಖಂಡ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಹಿಮಾಚಲ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಪ್ರತ್ಯೇಕ ಭಾಗಗಳಲ್ಲಿ ಶೀತ ಅಲೆಯು ಮೇಲುಗೈ ಸಾಧಿಸುವ ಸಾಧ್ಯತೆಯಿದ್ದು, ಚಳಿ ವಿಪರೀತವಾಗಲಿದೆ.


Nk Channel Final 21 09 2023