ಬೆಂಗಳೂರು: ಇಂದಿನಿಂದ 5 ದಿನಗಳವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಇಂದು, ನಾಳೆ ಕರಾವಳಿಗೆ ರೆಡ್ ಅಲರ್ಟ್ ವಿಸ್ತರಣೆ ಆಗಲಿದೆ. ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ಮಳೆ ಭಾರೀ ಅಬ್ಬರಿಸುತ್ತಿದೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದು, ಒಂದು ವಾರದಿಂದ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಈ ಹಿಂದೆ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

