ಬೆಂಗಳೂರು: ಕರ್ನಾಟಕದಲ್ಲಿ ಮಧ್ಯೆ ಭಾನುವಾರದಿಂದ ಎರಡು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಜತೆ ಮೋಡವೂ ಕೂಡ ಇದೆ.
ಇಂದಿನಿಂದ ತಮಿಳುನಾಡಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.