ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಮಾ 21ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೊಪ್ಪಳ, ವಿಜಯಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ 2 ದಿನಗಳು ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾ. 18 ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ವರ್ಷಧಾರೆಯಾಗುವ ನಿರೀಕ್ಷೆಯಿದೆ. ಅಲ್ಲದೆ ಮಾ. 19 ರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ, ರಾಯಚೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.