News Karnataka Kannada
Friday, May 03 2024
ಬೆಂಗಳೂರು

ರಾಜ್ಯದಲ್ಲಿ ಮುಂದುವರಿದ ಚಳಿ: ಅಲ್ಲಲ್ಲಿ ಮಳೆ ಸಾಧ್ಯತೆ

Heavy rains lash several parts of Karnataka, including Bengaluru, for two days
Photo Credit : News Kannada

ಬೆಂಗಳೂರು: ರಾಜ್ಯದಾದ್ಯಂತ ಚಳಿ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಡಿ. 17 ರಿಂದ ಎರಡು ದಿನಗಳ ಕಾಲ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ. ದಿನೇ ದಿನೇ ವಾತಾವರಣದಲ್ಲಿನ ತಂಪು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಇರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು