News Karnataka Kannada
Saturday, May 04 2024
ಬೆಂಗಳೂರು

ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

ಬಳ್ಳಾರಿ, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ವರದಿ ತಿಳಿಸಿದೆ.
Photo Credit : NewsKarnataka

ಬೆಂಗಳೂರು: ಬಳ್ಳಾರಿ, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ವರದಿ ತಿಳಿಸಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಗುಡುಗು-ಮಿಂಚು ಸಹಿತ ಮಳೆ ಎಚ್ಚರಿಕೆಯನ್ನು ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು