News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು ಸೇರಿದಂತೆ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕಕ್ಕೆ ೨೦೨೪ರ ಮೊದಲ ಮಳೆಯು ಮಾರ್ಚ್ ತಿಂಗಳಲ್ಲೇ ಸುರಿದಿದೆ. ರಾಜ್ಯದ ಘಟ್ಟ ಪ್ರದೇಶಗಳಾದ ಹಾಗೂ ಹಲವು ನದಿಗಳ ಉಗಮ ಸ್ಥಾನಗಳೂ ಆಗಿರುವ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಮಳೆಯಾಗಿದೆ. ಇದರಿಂದ ಕಾದು ಕೆಂಡದಂತಾಗುತ್ತಿದ್ದ ಭೂಮಿ ತಂಪಾಗಿದ್ದು, ಕೆಲವು ಹಳ್ಳ ಕೊಳ್ಳಗಳು ಕೂಡ ತುಂಬಿ ಹರಿದಿವೆ.
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಮಳೆ ವಾತಾವರಣ ಮುಂದುವರಿದಿದ್ದು ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಧಾರವಾಡ, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಡಿಸೆಂಬರ್ 20ರವರೆಗೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು