Bengaluru 22°C
Ad

ಸಿಲಿಕಾನ್ ಸಿಟಿಗೆ ಮತ್ತೆ ತಂಪೆರೆದ ಮಳೆರಾಯ : ವಾಹನ ಸವಾರರು ಪರದಾಟ

ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು:  ಸಿಲಿಕಾನ್‌ ಸಿಟಿ ಹಲವು ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಜೋರು ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸಿದರು. ರಾಜ್ಯಕ್ಕೆ ಮುಂಗಾರು ಆಗಮಿಸುತ್ತಿದೆ. ಇತ್ತ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದು, ಪರಿಣಾಮ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 1 ಗಂಟೆಯಾಗುತ್ತಿದ್ದಂತೆ ಹನಿ ಮಳೆ ಆರಂಭವಾಗಿ, 2 ಗಂಟೆಗೆ ಮಳೆ ಜೋರಾಯಿತು.

ಗುಡುಗು, ಸಿಡಿಲಿನ ಜತೆ ಒಂದು ಗಂಟೆಗೂ ಹೆಚ್ಚು ಕಾಲ ಬಿದ್ದ ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತಿದೆ. ಇದರಿಂದ ವಾಹನ ಸವಾರರು ಸಂಚಾರ ನಡೆಸಲಾಗದೆ ಸಮಸ್ಯೆ ಅನುಭವಿಸಿದರು. ಸಂಜೆ 4 ಗಂಟೆಯಾದರೂ ತುಂತುರು ಮಳೆ ಹಲವು ಪ್ರದೇಶಗಳಲ್ಲಿ ಮುಂದುವರೆದಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವರುಣನ ಆಗಮನದ ಸೂಚನೆ ಇದೆ. ಬೆಂಗಳೂರಿನಲ್ಲಿ ವರುಣನ ಆರ್ಭಟ ಮತ್ತೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ

Ad
Ad
Nk Channel Final 21 09 2023
Ad