News Karnataka Kannada
Sunday, April 21 2024
Cricket
ರಾಮನಗರ

ಮಲೇರಿಯ ನಿಯಂತ್ರಣಕ್ಕೆ ಹೊಸ ವಿಧಾನ: ಡಾ.ಶಶಿಕಲಾ

Health
Photo Credit :

ರಾಮನಗರ: ಮಲೇರಿಯ ರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು ಇದರಿಂದ ಸಮುದಾಯದಲ್ಲಿ ಸಾವು-ನೋವು ಉಂಟಾಗುವ ಸಾಧ್ಯತೆಯಿರುತ್ತದೆ. ಮಲೇರಿಯ ನಿಯಂತ್ರಿಸಲು ಹೊಸ ವಿಧಾನಗಳನ್ನು ಬಳಸಿ ಜೀವ ಉಳಿಸಬೇಕಿದೆ.  2025ರ ವೇಳೆಗೆ ಮಲೇರಿಯ ಮುಕ್ತ ಭಾರತ ನಿರ್ಮಿಸಲು ಎಲ್ಲರೂ ಸಹಕರಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶಶಿಕಲಾ ಅವರು ಸಲಹೆ ನೀಡಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ  ಕಛೇರಿ ರಾಮನಗರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಬಿಡದಿ ಹಾಗೂ ವಿವಿಧ ಅಭಿವೃದ್ಧಿ ಇಲಾಖೆಗಳು, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ “ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಲೇರಿಯ ರೋಗವು ಸೋಂಕಿತ ಸೊಳ್ಳೆಯು ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ ರೋಗವು ಒಬ್ಬರಿಂದ ಮೊತ್ತೊಬ್ಬರಿಗೆ  ಹರಡುತ್ತದೆ. ಈ ರೋಗವು ಫ್ಲಾಸ್‌ಮೋಡಿಯಂ ಎಂಬ ಪರೋಪಜೀವಿಯಿಂದ ಬರುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್ ಅವರು ರೋಗ ಹರಡುವಿಕೆ ಬಗ್ಗೆ ಮಾತನಾಡಿ, ಸೊಳ್ಳೆ ಕಚ್ಚಿದ 10 ರಿಂದ 14ದಿನದವರೆಗೆ ಚಳಿ- ಜ್ವರ, ಮೈ ಬೆವರುವುದು, ನಡುಕ, ತಲೆನೋವು, ಮೈಕೈ ನೋವು, ವಾಂತಿ, ನಿಶಕ್ತಿ ಇಂತಹ ಲಕ್ಷಣಗಳು ಕಂಡುಬರುತ್ತವೆ. ಈ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಶಂಕಿತ ಪ್ರಕರಣಗಳ ಪತ್ತೆಮಾಡಿ ರಕ್ತ ಲೇಪನ ಸಂಗ್ರಹಿಸಿ ಪರೀಕ್ಷೆಮಾಡಿ ಉಚಿತವಾಗಿ ನೀಡುವ ಚಿಕಿತ್ಸೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಕೀಟಶಾಸ್ತ್ರ ತಜ್ಞರಾದ ಮಾತನಾಡಿ, ಮಲೇರಿಯ ನಿಯಂತ್ರಿಸಲು ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗೃತ  ಕ್ರಮಗಳಾದ ಸ್ವಯಂ ರಕ್ಷಣೆ, ಪರಿಸರ ವಿಧಾನ, ಜೈವಿಕ ವಿಧಾನ, ಮತ್ತು ರಾಸಾಯನಿಕ ವಿಧಾನಗಳ ಬಗ್ಗೆ ತಿಳಿಸಿದರು. ಹಾಗೂ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಲಾರ್ವಾ ಸಮೀಕ್ಷೆ ಮಾಡುವ ವೇಳೆ ಸಾರ್ವಜನಿಕರು ಸಹಕರಿಸಬೇಕು ಪರಿಸರ ಸ್ವಚ್ಛತೆಯ ಬಗ್ಗೆ ಕಾಳಜಿವಹಿಸಿ ಸುತ್ತ- ಮುತ್ತಲ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಸಹಕರಿಸುವಂತೆ ಮನವಿ ಮಾಡಿದರು.

ಬಿಡದಿ ಪುರಸಭೆ ಮಾಜಿ ಸದಸ್ಯ ರಮೇಶ್‌ಕುಮಾರ್ ಮಾತನಾಡಿ, ಮಲೇರಿಯ ರೋಗವನ್ನು ನಿಯಂತ್ರಿಸಲು ಸಮುದಾಯದಲ್ಲಿ ಆರೋಗ್ಯ ಇಲಾಖೆಯೊಂದಿಗೆ ನಾವುಗಳು ಸೇರಿ ಇನ್ನು ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಸುವ ಮೂಲಕ ಮಲೇರಿಯ ಮುಕ್ತ  ಸಮಾಜವನ್ನು ನಿರ್ಮಿಸೋಣ ಎಂದರು.

ಕಾರ್ಯಕ್ರಮದಲ್ಲಿ ವೈದ್ಯರುಗಳಾದ ಡಾ.ರಾಘವೇಂದ್ರ, ಡಾ.ನಳಿನಿ, ಡಾ.ಅರ್ಚನ, ಎಸ್.ಬಿ.ಸಿ.ಸಿ ಸಂಯೋಜಕರಾದ  ಸುರೇಶ್‌ಬಾಬು, ಮನೋವೈದ್ಯಕೀಯ ಕಾರ್ಯಕರ್ತೆ ಪದ್ಮರೇಖಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನೇತ್ರಾವತಿ, ಅರುಣ್, ಆರೋಗ್ಯ ಸಿಬ್ಬಂದಿ, ಆಶಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು