News Karnataka Kannada
Tuesday, April 23 2024
Cricket
ರಾಮನಗರ

ರಾಷ್ಟ್ರೀಯ ಪಕ್ಷಗಳಿಂದಾದ ಅನ್ಯಾಯ ಸರಿಪಡಿಸುವೆ: ಎಚ್.ಡಿ.ಕುಮಾರಸ್ವಾಮಿ

Kumarswamy
Photo Credit :

ರಾಮನಗರ: ರಾಷ್ಟ್ರೀಯ ಪಕ್ಷಗಳಿಂದ ಆಗಿರುವ ಅನ್ಯಾಯವನ್ನು ತಿಳಿಸುವ ಜೊತೆಗೆ ಜೆಡಿಎಸ್‌ಗಿರುವ ಬದ್ದತೆಯನ್ನು ಜನರಿಗೆ ತಿಳಿಸುವುದಲ್ಲದೆ, ರಾಜ್ಯಕ್ಕೆ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜನತೆಗೆ ವಚನ ನೀಡಲು ಜನತಾ ಜಲಧಾರೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬಿಡದಿ ಪಟ್ಟಣದ ಬಿಜಿಎಸ್ ವೃತ್ತದಲ್ಲಿರುವ ಚುಂಚಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಿ ನಂತರ ಅವರು ಮಾತನಾಡಿ, ಕರ್ನಾಟಕದಲ್ಲಿ ಆಳಿದ ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದಲ್ಲಿ ಯಾವ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಆಗಲಿಲ್ಲ. ಸ್ವಾತಂತ್ರ್ಯಾ ನಂತರ ೭೫ ವರ್ಷ ಕಳೆದರೂ ರಾಜ್ಯದ ನೀರನ್ನು ಬಳಕೆ ಮಾಡಿಕೊಳ್ಳುವುದರಲ್ಲಿ ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷಿಸಿವೆ. ಈ ವಿಚಾರವನ್ನು ಜನರಿಗೆ ಮನದಟ್ಟು ಮಾಡಿಕೊಡುವುದು ಮತ್ತು ಜೆಡಿಎಸ್‌ಗೆ ಸ್ವತಂತ್ರವಾಗಿ ಸರಕಾರ ರಚಿಸಲು ಅಧಿಕಾರ ಕೊಟ್ಟರೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಜನತಾ ಜಲಧಾರೆ ಅಭಿಯಾನ ಹಮ್ಮಿಕೊಂಡಿರುವುದಾಗಿ ಹೇಳಿದರು.

ಜೆಡಿಎಸ್ ಪಕ್ಷಕ್ಕೆ ಐದು ವರ್ಷಗಳ ಅವಧಿಯ ಅಧಿಕಾರ ನಡೆಸಲು ಜನರು ಆಶೀರ್ವಾದ ಮಾಡಿದರೆ ರಾಜ್ಯದ ನದಿ ನೀರು  ವ್ಯರ್ಥ್ಯವಾಗದಂತೆ ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ಪಣ ತೊಟ್ಟಿದ್ದೇನೆ. ನಾನು ನುಡಿದಂತೆ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೇ ಜೆಡಿಎಸ್ ಪಕ್ಷವನ್ನು ವಿಸರ್ಜಿಸುವ ಘೋಷಣೆ ಮಾಡಿದ್ದು ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು. ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಈಗಾಗಲೇ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ನನಗೆ ಶಕ್ತಿ ತುಂಬಿ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ನಾಯಕರು ಇತ್ತೀಚೆಗೆ ಸಭೆಯೊಂದರಲ್ಲಿ ನಾವು ಅಧಿಕಾರಕ್ಕೆ ಬಂದರೇ ನೀರಾವರಿ ಯೋಜನೆಗಳನ್ನು ಜಾರಿಗೆ  ತರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ ಅವರಿಗೆ ಐದು ವರ್ಷಗಳ ಕಾಲ ಅಧಿಕಾರ ಸಿಕ್ಕಾಗ ಏಕೆ ಅನುಷ್ಠಾನ ತರಲಿಲ್ಲ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಬಹುಶಃ ಜೆಡಿಎಸ್ ಜಲಧಾರೆ ಕಾರ್ಯಕ್ರಮ ಅವರಿಗೆ ಈಗ ಪ್ರೇರಣೆ ನೀಡಿರಬಹುದು ಎಂದು ಟೀಕಿಸಿದರು.

ರಾಜ್ಯ ಸರಕಾರಕ್ಕೆ ಹಣದ ಕೊರತೆಯಿಲ್ಲ, ರಾಜ್ಯದ ಜನರು ಸಕಾಲಕ್ಕೆ ತೆರಿಗೆ ಕಟ್ಟುವ ಮೂಲಕ ಬೊಕ್ಕಸವನ್ನು  ಸಂಪದ್ಭರಿತ ಮಾಡಿದ್ದಾರೆ. ಜನರು ನೀಡುವ ತೆರಿಗೆ ಹಣದಲ್ಲಿ ರಾಜ್ಯದಲ್ಲಿ ಸಾಕಷ್ಟು ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಬಹುದು. ಆದರೆ ಆಡಳಿತಾರೂಢ ಬಿಜೆಪಿ ಸರಕಾರ 40% ಕಮೀಷನ್ ಹೊಡೆಯುವ ಮೂಲಕ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಎಂದು ಬಿಜೆಪಿ ಸರಕಾರದ ವಿರುದ್ಧವೂ ಹರಿಹಾಯ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು