Categories: ರಾಮನಗರ

ಆಕ್ಸಿಜನ್ ಘಟಕ ಲೋಕರ್ಪಣೆ

ರಾಮನಗರ : ಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು. ಶಾಸಕ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಗಡಿ ತಾಲೂಕ್ ಆಸ್ಪತ್ರೆ ಆವರಣದಲ್ಲಿ ಕೆಆರ್ ಐಡಿಎಲ್ ನ ಸಿಎಸ್ ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ಆಮ್ಲಜನಕ ಉತ್ಪಾದನಾ ಘಟಕ ನಿಮಿಷಕ್ಕೆ 580 ಲೀಟರ್ ಆಮ್ಲಜನಕ ಉತ್ಪಾದಿಸಬಲ್ಲದಾಗಿದೆ. ಇದರಿಂದಾಗಿ ಆಸ್ಪತ್ರೆಯು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದಂತಾಗಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ನಂತರ ತಾಲೂಕಿನ ಕರಲಮಂಗಲಕ್ಕೆ ಭೇಟಿ ನೀಡಿ, ಸಂಜೀವಿನಿ ಒಕ್ಕೂಟದ ಮಹಿಳಾ ಸ್ವ-ಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಣೆ ಮಾಡುತ್ತಿರುವ ‘ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣ ಕೇಂದ್ರ ವನ್ನು ಸಚಿವರು ವೀಕ್ಷಿಸಿದರು. ಮಹಿಳೆಯರು ಈ ಯಂತ್ರಗಳ ಮೂಲಕ ಮಾಸಿಕ ಅಂದಾಜು 60,000 ರೂಪಾಯಿ ದುಡಿಯುತ್ತಿದ್ದು, ಅವರೊಂದಿಗೆ  ಸಂವಾದ ನಡೆಸಿದರು .

Raksha Deshpande

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

18 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

60 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago