ರಾಮನಗರ

ಆಪರೇಷನ್ ಕಮಲದ ನಿಪುಣ ಅಲ್ಲ ಪಕ್ಷದ ಕಾರ್ಯಕರ್ತ: ಸಿಪಿವೈ

ರಾಮನಗರ: ನಾನು ಆಪರೇಷನ್ ಕಮಲದ ನಿಪುಣ ಅಲ್ಲ. ಆದರೆ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷ ಸಂಘಟನೆಗೆ ಮುಂದಿನ ದಿನಗಳಲ್ಲಿ ಎಲ್ಲ ತಾಲೂಕುಗಳಲ್ಲಿಯೂ ಪ್ರವಾಸ ಕೈಗೊಳ್ಳುತ್ತೇನೆ. ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಅಭ್ಯರ್ಥಿಗಳ ಕುರಿತು ಪಕ್ಷ ತೀರ್ಮಾನ ಮಾಡುತ್ತದೆ. ನಾವು ನಮ್ಮ ಕೆಲಸವನ್ನು ಪ್ರಾರಂಭ ಮಾಡುತ್ತೇವೆ. ನಮ್ಮ ಪಕ್ಷ, ನನ್ನನ್ನು ಎಲ್ಲೆಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳುತ್ತೋ ಅಲ್ಲೆಲ್ಲಾ ನಾನು ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಮಂಡ್ಯ ಸಂಸದೆ ಸುಮಲತಾ ಅವರನ್ನು ವಿವಾಹ ಕಾರ್ಯಕ್ರಮವೊಂದರಲ್ಲಿ  ಭೇಟಿಯಾಗಿದ್ದೆ. ಅಲ್ಲಿಗೆ ಮುಖ್ಯಮಂತ್ರಿಗಳು ಕೂಡ ಬಂದಿದ್ದರು. ಸುಮಲತಾ ಅವರನ್ನು ಪಕ್ಷಕ್ಕೆ ಅಹ್ವಾನ ಮಾಡಿದ್ದೀವಿ. ಇಲ್ಲ ಅಥವಾ ಸುಳ್ಳು ಅಂತ ಹೇಳಿಲ್ಲ. ತೀರ್ಮಾನ ಅವರಿಗೆ ಬಿಟ್ಟಿದ್ದು. ನಮ್ಮ ಪಕ್ಷ ಕೂಡ ಅವರ ಗೆಲುವಿಗೆ ಸಾಕಷ್ಟು ಶ್ರಮ ವಹಿಸಿದೆ. ಮಂಡ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಇಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಅವಕಾಶಗಳಿವೆ. ಒಳ್ಳೆಯ ತೀರ್ಮಾನ ಮಾಡುವಂತೆ ಸುಮಲತಾ ಅವರ ಬಳಿ ರಿಕ್ವೆಸ್ಟ್ ಮಾಡಿದ್ದೀನಿ. ಅವರು ಒಳ್ಳೆಯ ನಿರ್ಧಾರ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಬಿಜೆಪಿಯಿಂದ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಮಲತಾ ಅವರು ಇನ್ನು ಪಕ್ಷಕ್ಕೆ ಬಂದಿಲ್ಲ. ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ. ನಾವು ಸಮಾಜಮುಖಿಯಾಗಿ ಕೆಲಸ ಮಾಡುವಂತಹವರು. ಸಮಾಜಕ್ಕೆ ಅನುಕೂಲ ಆಗುವಂತಹ ಪ್ರಮುಖರನ್ನು ಹಾಗೂ ಮುಖಂಡರನ್ನು ಪಕ್ಷಕ್ಕೆ ಆಹ್ವಾನ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಮಂಡ್ಯದ ಐಆರ್‌ಎಸ್ ಅಧಿಕಾರಿ ಲಕ್ಷ್ಮೀ ಅವರು ಈ ಹಿಂದೆ ಜೆಡಿಎಸ್‌ನಲ್ಲಿ ಸಕ್ರೀಯವಾಗಿ ಇದ್ದರು. ಅವರನ್ನು ಕೂಡ ಆಹ್ವಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಾಗಿ ಬಿಜೆಪಿ ಸೇರಲಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿಯ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಮುಂದಿನ ತಿಂಗಳಿನಿಂದ ಪ್ರಕ್ರಿಯೆ ಆರಂಭವಾಗಲಿದೆ. ನಾನು ಆಪರೇಷನ್ ನಿಪುಣ ಅಲ್ಲ. ಆದರೆ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago