ರಾಮನಗರ

ಈಜಲು ಹೋದ ಬಾಲಕರು ನೀರು ಪಾಲು

ರಾಮನಗರ: ತಾಲ್ಲೂಕಿನ ಬಿಡದಿ ಸಮೀಪದ ಕೆಂಚನಕುಪ್ಪೆ ಗ್ರಾಮದ ಕುಂಬಾರಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಶಾಲಾ ಬಾಲಕರು ನೀರು ಪಾಲಾಗಿರುವ ಘಟನೆ ನಡೆದಿದೆ.

ಬಿಡದಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಕೌಶಿಕ್(11) ಮತ್ತು ಕರ್ಣ(12) ಮೃತ ಬಾಲಕರು. ಇಬ್ಬರೂ ಬಿಡದಿ ಪಟ್ಟಣದ ಇಂದಿರಾನಗರ ನಿವಾಸಿಯಾಗಿದ್ದಾರೆ. ಕೌಶಿಕ್ ತಂದೆ ಉಮೇಶ್ ಪೆಟ್ಟಿಗೆ ಅಂಗಡಿ ಇಟ್ಟುಕೊಂಡಿದ್ದು ದಿನಪತ್ರಿಕೆಗಳನ್ನು ಮಾರಾಟ ಮಾಡುತ್ತಾರೆ. ಕರ್ಣನ ತಂದೆ ಗುಂಡಪ್ಪ ಎಂಬುವರು ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾಗದ ಕಾರಣ ಕೌಶಿಕ್ ಮನೆಯಲ್ಲಿಯೇ ಉಳಿದುಕೊಂಡಿದ್ದು, ಕರ್ಣ ಶಾಲೆ ಬಿಟ್ಟಿದ್ದನು. ಇಬ್ಬರೂ ಸ್ನೇಹಿತರಾಗಿದ್ದು ಜೊತೆಯಲ್ಲಿಯೇ ಓಡಾಡುತ್ತಿದ್ದರು. ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು. ಗುರುವಾರ ಮಧ್ಯಾಹ್ನ ಕಟ್ಟೆಯಲ್ಲಿ ಈಜಾಡುತ್ತಿದ್ದ ಬಾಲಕರನ್ನು ಸ್ಥಳೀಯರು ಗದರಿಸಿ ಮನೆಗೆ ಕಳುಹಿಸಿದ್ದರು.  ನಂತರ ಮತ್ತೆ ವಾಪಸ್ ಬಂದ ಬಾಲಕರು ಕಟ್ಟೆಯಲ್ಲಿ ಈಜಾಡಲು ಹೋಗಿ ನೀರಿನ ಆಳ ಅರಿಯದೆ ಕೆಸರಿನಲ್ಲಿ ಸಿಲುಕಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕುಂಬಾರ ಕಟ್ಟೆಯಲ್ಲಿ ಶವಗಳು ತೇಲುತ್ತಿದ್ದುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಡದಿ ಪೋಲಿಸರು ಪರಿಶೀಲನೆ ನಡೆಸಿದರು. ನುರಿತ ಈಜುಗಾರರಿಂದ ಬಾಲಕರ ಮೃತ ದೇಹಗಳನ್ನು ಹೊರಗೆ ತೆಗೆಯಲಾಯಿತು.

Swathi MG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

21 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

30 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

41 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

60 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago