Categories: ರಾಮನಗರ

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ

ರಾಮನಗರ: ಕಾಂಗ್ರೆಸ್ ಪಕ್ಷ ನಾಯಕತ್ವದ ಕೊರತೆಯಿಂದ ಬಳಲುತ್ತಿದ್ದು, ಇಡೀ ದೇಶದಲ್ಲಿ ಹೀನಾಯ ಸ್ಥಿತಿ ತಲುಪಿದೆ. ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರ ಮೇಲೆ ಆ ಪಕ್ಷದ ನಾಯಕರಲ್ಲಿಯೇ ವಿಶ್ವಾಸವಿಲ್ಲ.  ಇನ್ನು ಜೆಡಿಎಸ್ ಪಕ್ಷ ಕುಟುಂಬ ರಾಜಕಾರಣದಿಂದ ಸೊರಗಿದೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಈ ಬಗ್ಗೆ ಯಾವುದೆ ಅನುಮಾನವಿಲ್ಲ ಎಂದು ಮಾಜಿ ಸಚಿವರೂ ಆದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಎಂಟು ವರ್ಷಗಳ ಆಡಳಿತ ನೀಡಿದ  ಹಿನ್ನೆಲೆಯಲ್ಲಿ ಸರ್ಕಾರದ ಜನಪರ ಸಾಧನೆಗಳ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರದಲ್ಲಿ ಎಂಟು ವರ್ಷಗಳ ಹಿಂದೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದ್ದ ಯುಪಿಎ ಸರ್ಕಾರದ  ಭ್ರಷ್ಟಾಚಾರದ ಆಡಳಿತದಿಂದ ಬೇಸತ್ತ ದೇಶದ ಜನರು ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತಂದರು.

ಮೋದಿ ಜನರ ವಿಶ್ವಾಸಕ್ಕೆ ಧಕ್ಕೆ ತರದ ರೀತಿಯಲ್ಲಿ ದೂರದೃಷ್ಟಿಯಿಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ದೇಶವು ಇಂದು ಸರ್ವಾಂಗೀಣ ಅಭಿವೃದ್ಧಿಕಾಣುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಾಲಕೃಷ್ಣ ಅವರನ್ನು ಈ ಹಿಂದೆ ಬಿಜೆಪಿ ಪಕ್ಷ ಸೇರುವಂತೆ  ಆಹ್ವಾನ ನೀಡಲಾಗಿತ್ತು, ಆದರೆ ಅವರು ಅಷ್ಟು ಆಸಕ್ತಿ ತೊರಲಿಲ್ಲ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅವರ ಬೆಂಬಲಿಗರು ಬಿಜೆಪಿ ಸೇರುತ್ತಿದ್ದು, ಮುಂದಿನ ದಿನಗಳಲ್ಲಿ ಅವರು ಬಿಜೆಪಿ ಸೇರಬಹುದೆಂಬ ಆಶಾಭಾವನೆ ಇದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜ್, ಜಿಲ್ಲಾ ವಕ್ತಾರ ಕೇಶವಮೂರ್ತಿ, ಸಹಾಯಕ  ಪ್ರಬಾರಿ ವಿಜಯಕುಮಾರ್, ಜಿಲ್ಲಾ ಉಪಾಧ್ಯಕ್ಷ ರಾಮಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು, ಜಿಲ್ಲಾ ಮಾಧ್ಯಮ ಸಂಚಾಲಕ ಚಂದ್ರಶೇಖರ ರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago