ರಾಮನಗರ: ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ ಸಂಭವಿಸಿದೆ. ಕೆಎ 51, ಪಿ 3384 ನೋಂದಣಿ ಕಾರು ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ವಸ್ತುಗಳು ಸುಮಾರು 50 ಮೀಟರ್ ದೂರಕ್ಕೆ ಬಿದ್ದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಫೋಟದ ತೀವ್ರತೆಗೆ ಕಾರಿನಲ್ಲಿದ್ದ ವಸ್ತುಗಳು ಸಹಿತ ಕಾರಿನ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ. ಕಾರ್ ಸ್ಫೋಟದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಾರ್ ಏಕಾಏಕಿ ಹೇಗೆ ಸ್ಫೋಟವಾಯಿತು, ಅದು ಯಾವ ಕಾರ್ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕಾರ್ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಕಾರಿನಲ್ಲಿ ಕಲ್ಲಿನ ಸ್ಪೋಟಕಗಳನ್ನು ಸಾಗಿಸಲಾಗುತಿತ್ತು ಎನ್ನಲಾಗಿದೆ.