ರಾಮನಗರ

ಕೆರೆಯ ಮೀನಿಗೆ ಕಂಟಕವಾದ ರಾಸಾಯನಿಕ ನೀರು

ರಾಮನಗರ:  ಇಟ್ಟಮಡು ಗ್ರಾಮದ ಬಳಿಯಿರುವ ದೊಡ್ಡಕೆರೆಗೆ ಕಾರ್ಖಾನೆಗಳ ರಾಸಾಯನಿಕ ಮಿಶ್ರಣದ ನೀರು ಸೇರುತ್ತಿರುವ ಕಾರಣ ಮೀನುಗಳು ಸಾವನ್ನಪ್ಪಿರುವುದು ಕಂಡುಬಂದಿದೆ.

ಬಿಡದಿ ಪುರಸಭೆ ವ್ಯಾಪ್ತಿಯ ಇಟ್ಟಮಡು ಗ್ರಾಮದ ಸಮೀಪ ಇರುವ ದೊಡ್ಡಕೆರೆಯನ್ನು ಮೀನು ಸಾಕಾಣಿಕೆಗಾಗಿ ಶ್ರೀನಿವಾಸ್ ಎಂಬುವರು ಸಣ್ಣ ನೀರಾವರಿ ಇಲಾಖೆಯಿಂದ ಟೆಂಡರ್ ಮೂಲಕ 5.50 ಲಕ್ಷ ರೂ.ಗೆ ಹರಾಜಿನಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಪಡೆದುಕೊಂಡಿದ್ದಾರೆ. ಸುಮಾರು 18 ಎಕರೆ ವಿಸ್ತೀರ್ಣ ಇರುವ ಕೆರೆಯಲ್ಲಿ ಲಕ್ಷಾಂತರ ಮೀನಿನ ಮರಿಗಳನ್ನು ಸಾಕಾಣಿಕೆಗೆ ಬಿಡಲಾಗಿತ್ತು. ಈ ಪೈಕಿ ಸುಮಾರು 2.50 ಟನ್ ಮೀನುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ.

ಅಕಾಲಿಕ ಮಳೆ ಸುರಿದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಕೆರೆಗೆ ಮಳೆ ನೀರಿನ ಜತೆಗೆ ಕಲುಷಿತ ನೀರು ಸೇರುತ್ತಿರುವ ಕಾರಣ ಆಮ್ಲಜನಕದ ಕೊರತೆಯಿಂದ ಮೀನುಗಳು ಸತ್ತಿವೆ. ಕೆಲವೇ ದಿನಗಳಲ್ಲಿ ಬಲೆ ಹಾಕಬೇಕಿದ್ದ ದಪ್ಪ ಮೀನುಗಳು ಹೆಚ್ಚಾಗಿ ಸಾವನ್ನಪ್ಪಿವೆ. ಇದರಿಂದ ಕೆರೆಯ ಗುತ್ತಿಗೆದಾರರು ಸಂಪೂರ್ಣ ನಷ್ಟ ಅನುಭವಿಸಿದ್ದಾರೆ. ಕೆರೆಯ ದಡದಲ್ಲಿ ರಾಶಿಗಟ್ಟಲೆ ಸತ್ತ ಮೀನುಗಳು ತೇಲುತ್ತಿರುವುದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಕೆರೆಯ ಬಳಿ ದುರ್ವಾಸನೆ ಬೀರುತ್ತಿರುವ ಕಾರಣ ಸತ್ತ ಮೀನುಗಳನ್ನು ತೆರವು ಮಾಡಲಾಗುತ್ತಿದೆ. ನೀರಿನಲ್ಲಿ ರಾಸಾಯನಿಕ ಬೆರೆತಿರುವ ಬಗ್ಗೆ ಅನುಮಾನವಿದ್ದು, ನೀರನ್ನು ಪರೀಕ್ಷೆಗಾಗಿ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ನಂತರ ಮೀನುಗಳ ಸಾವಿನ ನಿಜವಾದ ಕಾರಣ ತಿಳಿಯಲಿದೆ.

ಕೆರೆಯ ಸುತ್ತಮುತ್ತ ಕೈಗಾರಿಕಾ ಪ್ರದೇಶವೇ ಆವರಿಸಿಕೊಂಡಿದ್ದು, ಕಾರ್ಖಾನೆಯಿಂದ ಹೊರ ಬಿಡುತ್ತಿರುವ ತ್ಯಾಜ್ಯ ನೀರು ನೇರವಾಗಿ ಇಟ್ಟಮಡು ದೊಡ್ಡಕೆರೆ ಸೇರುತ್ತಿದೆ. ಕೆರೆಯಲ್ಲಿ ಈಗ ದುರ್ವಾಸನೆ ಬೀರುತ್ತಿದ್ದು, ಜನರು ತಿರುಗಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೀನುಗಳ ಸಾವಿಗೆ ಕೈಗಾರಿಕೆಗಳ ಕಲುಷಿತ ನೀರು ಕಾರಣವಾಗಿದ್ದು ಅಧಿಕಾರಿಗಳ ಪರಿಶೀಲನೆ ನಡೆಸಿ ಸತ್ಯವನ್ನು ಹೊರ ತರಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

5 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago