ರಾಮನಗರ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಿ: ಡಿ.ಕೆ.ಶಿವಕುಮಾರ್

ಕನಕಪುರ: ಸರ್ಕಾರ ಸರ್ವೆ ನಡೆಸಿ ಕೊರೊನಾದಿಂದ ಮೃತಪಟ್ಟವರನ್ನು ಪತ್ತೆ ಹಚ್ಚಿ ಅವರ ಕುಟುಂಬಕ್ಕೆ ಪರಿಹಾರ ವಿತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕೊರೊನಾ ಸರ್ಕಾರ ಸಾರ್ವಜನಿಕರಿಗೆ  ನೀಡಿರುವ ಗಿಫ್ಟ್ ಆಗಿದ್ದು  ಕೊರೊನಾದಿಂದ ಸಾವನ್ನಪ್ಪಿರುವವರು ರಾಜ್ಯದಲ್ಲಿ ಹೆಚ್ಚಿದ್ದು ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ದೂರಿದರಲ್ಲದೆ,  ಅಧಿಕಾರಿಗಳು, ಪಿಡಿಒಗಳು, ಕಂದಾಯ ಇಲಾಖೆಯ ಅಧಿಕಾರಿಗಳು  ಮನೆಮನೆಗೆ ತೆರಳಿ ಸರ್ವೆ ನಡೆಸುವಂತೆ ಆದೇಶ ನೀಡಿ ಮುಖ್ಯಮಂತ್ರಿಗಳು ಮುಂದಾಳತ್ವ ವಹಿಸಿ ಹೆಚ್ಚು ಪರಿಹಾರ ವಿತರಿಸಲಿ ಎಂದು ಸಲಹೆ ನೀಡಿದರು.

ರಾಗಿ ಮತ್ತು ತೊಗರಿ ಜೋಳ ಖರೀದಿ ಕೇವಲ 20 ಕ್ವಿಂಟಾಲ್ ಗೆ ನಿಲ್ಲಿಸಿರುವುದು ಸರಿಯಲ್ಲ. ಕಳೆದ ಎರಡು ವರ್ಷಗಳ ಹಿಂದೆ ಯಾವ ಮಾನದಂಡವನ್ನು ಅನುಸರಿಸಿ ಖರೀದಿಮಾಡಿ ಬೆಂಬಲ ಬೆಲೆ ನೀಡುತ್ತಿದ್ದರೋ ಅದೇ ಮಾನದಂಡವನ್ನು ಮಾಡಿ ರೈತರಿಗೆ ನೆರವಾಗಿ ಕೋವಿಡ್‍ ನಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ ಎಂದು ಹೇಳಿದರು.

ಸಂಸದ ಡಿ.ಕೆ.ಸುರೇಶ್ ಗೆ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಸಧ್ಯಕ್ಕೆ ಅದು ಚರ್ಚೆಯಲ್ಲಿಲ್ಲ. ಮುಂದೆ ರಾಜ್ಯ ರಾಜಕಾರಣ ಯಾವ ರೀತಿ ಸಾಗುತ್ತದೆಯೋ ಅದನ್ನು ನೋಡಿಕೊಂಡು ತೀರ್ಮಾನಿಸಲಾಗುವುದು. ಅದೀಗ ಅಪ್ರಸ್ತುತ ಎಂದು ಹೇಳಿದರು.

Swathi MG

Recent Posts

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

7 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

14 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

26 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

31 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

45 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago