Categories: ರಾಮನಗರ

ಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ; ಸಿದ್ದರಾಮಯ್ಯ

ರಾಮನಗರ : ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ನೀಡುವ ಸೂಚನೆಯನ್ನು‌ ಪಾಲಿಸಲು ನಾವು ಸಿದ್ಧರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಪಾದಯಾತ್ರೆ ಬಗ್ಗೆ ಹೈಕೋರ್ಟ್ ಚಾಟಿ ಬೀಸಿರುವ ಕುರಿತು ಅವರು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಹೈಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆಯೋ ಗೊತ್ತಿಲ್ಲ. ಕಾನೂನು‌ ರೀತಿಯಲ್ಲೂ ಹೋರಾಟ ಮುಂದುವರಿಸುತ್ತೇವೆ. ಸದ್ಯಕ್ಕೆ ಪಾದಯಾತ್ರೆ ಮುಂದುವರಿಯಲಿದೆ ಎಂದು ತಿಳಿಸಿದರು.

ಮಾಜಿ ಕಾನೂನು ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ನ್ಯಾಯಾಲಯದ ಬಗ್ಗೆ ನಮಗೆ ಗೌರವ ಇದೆ. ಅದರ ಆದೇಶಕ್ಕೆ ತಲೆಬಾಗುತ್ತೇವೆ ಎಂದರು.

ಹೈಕೋರ್ಟ್‌ನಲ್ಲಿ ಪಿಐಎಲ್ ವಿಚಾರಣೆ ಹಿನ್ನೆಲೆಯಲ್ಲಿ ಮಧ್ಯಾಹ್ನ ಕೆ.ಪಿ. ದೊಡ್ಡಿ ಗ್ರಾಮದಲ್ಲಿ ಊಟದ ವಿರಾಮದ ವೇಳೆ ಕಾಂಗ್ರೆಸ್ ನಾಯಕರು ಸಭೆ ನಡೆಸಿದರು.

Gayathri SG

Recent Posts

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

14 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

46 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

49 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

1 hour ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago