Categories: ರಾಮನಗರ

ಜೆಡಿಎಸ್‌ನಲ್ಲಿ ನಿಷ್ಠಾವಂತರ ಕಡೆಗಣನೆ: ಎಸ್.ಲಿಂಗೇಶ್‌ಕುಮಾರ್

ಚನ್ನಪಟ್ಟಣ: ತಾಲೂಕು ಜೆಡಿಎಸ್ ಮೂರು ಮಂದಿಯ ಹಿಡಿತಕ್ಕೆ ಸಿಲುಕಿ ನಲುಗಿದ್ದು, ಪಕ್ಷದಲ್ಲಿ ನಿಷ್ಠಾವಂತರು, ಹಳಬರಿಗೆ ಬೆಲೆ ಇಲ್ಲದಂತಾಗಿದೆ. ಇದರಿಂದ ಬೇಸತ್ತು ಪಕ್ಷ ತ್ಯಜಿಸಲು ನಿರ್ಧರಿಸಿದ್ದು, ಬಿಜೆಪಿ ಸೇರ್ಪಡೆಗೊಳ್ಳಲು ತೀರ್ಮಾನಿಸಿದ್ದೇನೆ ಎಂದು ಬಮೂಲ್ ಮಾಜಿ ನಿರ್ದೇಶಕ ಎಸ್.ಲಿಂಗೇಶ್‌ಕುಮಾರ್ ಘೋಷಿಸಿದರು.

ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮತ್ತಿತರ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದೇನೆ. ನನ್ನ ಈ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಜಯಮುತ್ತು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು ಈ ಮೂರು ಮಂದಿ ಸೇರಿಕೊಂಡು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ದಿಕ್ಕು ತಪ್ಪಿಸಿದ್ದಾರೆ. ಈ ಮೂರು ಮಂದಿಯಿಂದಾಗಿ ಜೆಡಿಎಸ್‌ನಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ ಎಂದು ನೇರ ಆರೋಪ ಮಾಡಿದರು.

ಈ ಮೂರು ಮಂದಿಯಿಂದಾಗಿ ಜೆಡಿಎಸ್‌ನಲ್ಲಿ ಗುಂಪುಗಾರಿಕೆ ಮಿತಿಮೀರಿದೆ. ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಈ ಮೂರು ಮಂದಿಯಿಂದಾಗಿ ಸ್ವಪಕ್ಷಿಯರ ವಿರುದ್ಧವೇ ಸ್ಪರ್ಧಿಸುವಂಥ ವಾತಾವರಣ ನಿರ್ಮಾಣವಾಗಿದೆ. ಬೇರೆ ಪಕ್ಷದ ಅಭ್ಯರ್ಥಿಗಳ ವಿರುದ್ಧ ಚುನಾವಣೆಯಲ್ಲಿ ಸೆಣಸಬೇಕಾದವರು, ನಮ್ಮ ಪಕ್ಷದ ಅಭ್ಯರ್ಥಿಯ ವಿರುದ್ಧವೇ ಸ್ಪರ್ಧಿಸುವಂತಾಗಿದೆ ಎಂದು ವಿಷಾದಿಸಿದರು.

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನನ್ನ ಸ್ಪರ್ಧೆಯನ್ನು ತಡೆಯಬೇಕೆಂಬ ಉದ್ದೇಶದಿಂದ ಸಿಂಗರಾಜಿಪುರ ವಿಎಸ್‌ಎಸ್‌ಎನ್ ನಿರ್ದೇಶಕರ ರಾಜೀನಾಮೆ ಕೊಡಿಸಿ ಅನಾವಶ್ಯಕ ಚುನಾವಣೆ ನಡೆಯುವಂತೆ ಮಾಡಿದರು. ಈ ಮೂರು ಮಂದಿಯ ಆಟಾಟೋಪಗಳನ್ನು ಕುಮಾರಸ್ವಾಮಿ ತಡೆಯಬಹುದಿತ್ತಾದರೂ ತಡೆಯುವ ಗೋಜಿಗೆ ಹೋಗಲಿಲ್ಲ. ಇದರಿಂದಾಗಿ ಪ್ರಾಮಾಣಿಕ ಕಾರ್ಯಕರ್ತರು ಬೇರೆ ಪಕ್ಷಗಳತ್ತ ಹೋಗುತ್ತಿದ್ದಾರೆ.  ಈಗ ಆರಂಭವಾಗಿರುವ ಪಕ್ಷಾಂತರ ಪರ್ವ ಮುಂದಿನ ದಿನಗಳಲ್ಲಿ ತಾರಕಕ್ಕೇರಲಿದ್ದು, ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆಯಲಿದ್ದಾರೆ ಎಂದು ಭವಿಷ್ಯ ನುಡಿದರು.

Swathi MG

Recent Posts

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

10 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

21 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

41 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

2 hours ago