Categories: ರಾಮನಗರ

ಡಿ.ಕೆ. ಸುರೇಶ್ ರನ್ನು ಬಂಧಿಸುವಂತೆ ಒತ್ತಾಯಿಸಿ ರಾಮನಗರದಲ್ಲಿ ಪ್ರತಿಭಟನೆ

ರಾಮನಗರ : ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಅನುಚಿತವಾಗಿ ವರ್ತಿಸಿದ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಅಲ್ಲಿಯೇ ಧರಣಿ ಕುಳಿತರು. ಪ್ರತಿಭಟನೆ ಕೈಬಿಡುವಂತೆ ಪೊಲೀಸರು‌ ಮಾಡಿದ ಮನವಿಗೂ ಬಗ್ಗಲಿಲ್ಲ.

ಒಬ್ಬ ಜವಾಬ್ದಾರಿಯುತ ಸಂಸದರಾಗಿ ಮುಖ್ಯಮಂತ್ರಿ ಎದುರು ಹೇಗೆ ವರ್ತಿಸಬೇಕು ಎಂಬ ಪರಿಜ್ಞಾನವೂ ಇಲ್ಲ. ಮಂತ್ರಿಯೊಬ್ಬರು ಮಾತನಾಡುತ್ತಿರುವಾಗ ಮೈಕ್ ಕಸಿದು ಹಲ್ಲೆಗೆ ಮುಂದಾಗಿದ್ದಾರೆ. ಇಂತಹ ಗೂಂಡಾ ಸಂಸ್ಕೃತಿಯ ವ್ಯಕ್ತಿಯನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ದಲಿತ ವಿರೋಧಿ ವರ್ತನೆ ತೋರಿದೆ. ನಿನ್ನೆ ಪ್ರತಿಭಟನೆ ಸಂಬಂಧ ಬಂಧಿಸಲ್ಪಟ್ಟವರೆಲ್ಲರೂ ದಲಿತರೇ ಆಗಿದ್ದಾರೆ. ದಲಿತರನ್ನು ಕಾಂಗ್ರೆಸ್ ಕೇವಲ‌ ಪ್ರತಿಭಟನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Gayathri SG

Recent Posts

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

10 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

36 mins ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

57 mins ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

1 hour ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

1 hour ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

1 hour ago