ರಾಮನಗರ : ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವು ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಗ್ರಾಮದ ಬಳಿ ಇರುವ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲವಾಡಿ ದೇವರಾಜ್ ತಿಳಿಸಿದರು.
ಈ ಸಂಬಂಧ ಪತ್ರಿಕೆಯೂಂದಿಗೆ ಮಾತನಾಡಿದ ಅವರು ಸಕಾ೯ಕರಾದ ಜನಪರ ಯೋಜನೆಗಳನ್ನು ಹಾಗೂ ಸಕಾ೯ರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಹಾಗೂ ಮುಂದಿನ ಚುನಾವಣೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಸಲುವಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು
ಈ ಜನಸ್ವರಾಜ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್. ಕೇಂದ್ರ ಸರ್ಕಾರದ ಸಚಿವ ಎ. ನಾರಾಯಣ ಸ್ವಾಮಿ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ. ಅಬಕಾರಿ ಸಚಿವ ಗೋಪಾಲಯ್ಯ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ. ಎಂ.ರಾಜೇಂದ್ರ.ಕಾಯ೯ಕ್ರಮದ ಸಂಚಾಲಕ ಮಹೇಶ್ ಟೆಂಕಿನ್ ಕಾಯಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾಜುಗೌಡ. ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು. ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್. ಪುಟ್ಟಣ್ಣ. ಅ ದೇವೇಗೌಡ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು