Categories: ರಾಮನಗರ

‘ಪಕ್ಷದಲ್ಲಿ ಬೆಳೆದು, ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು : ಎಚ್‌.ಡಿ. ಕುಮಾರಸ್ವಾಮಿ

ರಾಮನಗರ: ಜೆಡಿಎಸ್‌ನ ಮೂರ್ನಾಲ್ಕು ಶಾಸಕರು ಪಕ್ಷ ತೊರೆಯಲು ಸಿದ್ಧತೆ ನಡೆಸಿದ್ದು, ಅಂತಹ ಕ್ಷೇತ್ರಗಳಲ್ಲಿ ಈಗಾಗಲೇ ಪರ್ಯಾಯ ಅಭ್ಯರ್ಥಿಗಳನ್ನು ಹುಡುಕಿಕೊಂಡಿದ್ದೇವೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಭಾನುವಾರ ಬಿಡದಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಪಕ್ಷದಲ್ಲಿ ಬೆಳೆದು, ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ’ ಎಂದರು.

ಈ ಹಿಂದೆ‌ ಕೆಲವರು ಪಕ್ಷದ ಶಕ್ತಿ ಬಳಸಿಕೊಂಡು ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಟ್ಟು ಹೋದರು. ಇವರಿಂದಲೇ ಪಕ್ಷದ ಸಂಘಟನೆ ಹಿಂದೆ ಉಳಿಯಿತು. ನಿನ್ನೆಯೂ ಒಬ್ಬ ಶಾಸಕರು ನಾನಾಗಿಯೇ ಪಕ್ಷ ಬಿಟ್ಟು ಹೋಗಲ್ಲ, ನಾಯಕರೇ ಗೊಂದಲ ಸೃಷ್ಟಿ ಮಾಡ್ತಿರೋದು ಅಂದಿದ್ದಾರೆ. ನಾವ್ಯಾಕೆ ಗೊಂದಲ ಸೃಷ್ಟಿ ಮಾಡೋಣ. ಒಳಗೊಳಗೇ ಸಂಚು ರೂಪಿಸಿಕೊಂಡು ನನ್ನ ಮೇಲೆ ಗೂಬೆ ಕೂರಿಸುತ್ತಾರೆ. ಅಧಿಕಾರದ ರುಚಿ ಕಂಡು ನಡುನೀರಲ್ಲಿ ಕಾರ್ಯಕರ್ತರನ್ನು ಬಿಟ್ಟು ಹೋಗ್ತಾರೆ ಎಂದು ಟೀಕಿಸಿದರು.

ನಮ್ಮಿಂದ ಯಾವುದೇ ಶಾಸಕರಿಗೆ ಅಪಚಾರವಾಗಿಲ್ಲ. ಪಕ್ಷ‌ ಬಿಡೋರು ಮೊದಲು ಆತ್ಮ ವಿಮರ್ಶೆ ಮಾಡಿಕೊಳ್ಳಲಿ. ನಮ್ಮ ಪಕ್ಷದ ಬಾಗಿಲು ಸದಾ ತೆರೆದಿದೆ. ಯಾವಾಗ ಬೇಕಾದ್ರೂ ಚರ್ಚೆಗೆ ಅವಕಾಶ ಇದೆ ಎಂದು ಅವರು ಸ್ಪಷ್ಟಪಡಿಸಿದರು. ಪಕ್ಷ ತೊರೆಯುವ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಕುಳಿತು ಚರ್ಚಿಸಬಹುದಾದ ವಿಚಾರಗಳನ್ನು ಹೊರಗೆ ಹೇಳುವುದು ಸರಿಯಲ್ಲ. ಏನೇ ಸಮಸ್ಯೆ, ಗೊಂದಲ ಇದ್ದರೂ ಬರಲಿ. ಚರ್ಚೆ ಮಾಡಲು ನಾನು ಸಿದ್ಧ ಇದ್ದೇನೆ. ಯಾರೂ ಪಕ್ಷದ ಸಂಘಟನೆಗೆ ಹೊಡೆತ ಬೀಳುವಂತೆ ನಡೆದುಕೊಳ್ಳಬಾರದು ಎಂದು ತಾಕೀತು ಮಾಡಿದರು.

ಜೆಡಿಎಸ್ ಕಾರ್ಯಕರ್ತರ ಪಕ್ಷ. ಅದು ದುರ್ಬಲ ಆಗಿಲ್ಲ. ಆಗುವುದೂ ಇಲ್ಲ. ಪಕ್ಷ ತಳಮಟ್ಟದಿಂದ ಪುಟಿದೇಳುತ್ತಿದೆ ಎಂದರು.
ನಮ್ಮ ಪಕ್ಷ ನಿಷ್ಕ್ರಿಯ ಆಗಿಬಿಟ್ಟಿದೆ ಎಂದು ಕೆಲವರು ಅಂದುಕೊಂಡಿದ್ದರು ಕೆಲವರು. ಈಗ ಜೆಡಿಎಸ್ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿರುವಂತಿದೆ. ಅದೇ ಕಾರಣಕ್ಕೆ ನಮ್ಮಂತೆಯೇ ಕಾರ್ಯಾಗಾರ ಆಯೋಜಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ವಿಜಯದಶಮಿ ನಂತರ ಜೆಪಿ ಭವನದಲ್ಲಿ ಜಿಲ್ಲಾವಾರು ಸಭೆ ಮಾಡುತ್ತೇವೆ. ಎರಡನೇ ಹಂತದ ಕಾರ್ಯಾಗಾರ ಆರಂಭ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

Sneha Gowda

Recent Posts

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

4 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

6 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

17 mins ago

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​…

21 mins ago

ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

ಖಾಸಗಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕ ಶರಣು ಸಲಗರ್‌ ಅವರು ಪತ್ನಿ ಹಾಗು ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ಶಾಸಕ ಶರಣು ಸಲಗರ್‌ರಿಂದ…

31 mins ago

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

1 hour ago