News Karnataka Kannada
Friday, May 03 2024
ರಾಮನಗರ

ಪಕ್ಷ ಸೂಚಿಸಿದರೆ ನೂರಕ್ಕೆ ನೂರು ಕನಕಪುರದಿಂದ ಸ್ಪರ್ಧೆ ಮಾಡುತ್ತೇನೆ; ಸಿ.ಪಿ ಯೋಗೇಶ್ವರ್‌

Cp Yogeshwar
Photo Credit :

ಚನ್ನಪಟ್ಟಣ : ‘ಪಕ್ಷದ ವರಿಷ್ಠರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆ ಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ ಸ್ಪರ್ಧೆಮಾಡು ಎಂದರೂ ನಾನು ಸಿದ್ಧ’ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ ಯೋಗೇಶ್ವರ್‌ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗೇಶ್ವರ್‌, 1999 ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದಾಗ ಶಿವಕುಮಾರ್ ನನಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸಿದರು. ಚನ್ನಪಟ್ಟಣದ ನೀರಾವರಿಗಾಗಿ ಬಿಜೆಪಿ ಸೇರಿದ ನಾನು 2013 ರಲ್ಲಿ ಬಿಜೆಪಿ ಮೂರು ಭಾಗವಾದಾಗ ನನ್ನ ಅಸ್ಥಿತ್ವಕ್ಕಾಗಿ ಮತ್ತೆ ಕಾಂಗ್ರೆಸ್‍ಗೆ ಬಂದೆ. ಆಗಲೂ ಇದೇ ವ್ಯಕ್ತಿ ಮತ್ತೊಮ್ಮೆ ಟಿಕೆಟ್‌ ತಪ್ಪಿಸಿದರು. ಕಳೆದ 25 ವರ್ಷಗಳಿಂದ ನನಗೆ ಕಿರುಕುಳ ಕೊಟ್ಟುಕೊಂಡು ಬಂದಿದ್ದಾರೆ. ಅವರ ಜೊತೆಗೆ ನಾನು ಹೇಗೆ ಹೋಗಲಿ. ಕಾಂಗ್ರೆಸ್‌ ಸೇರಲಾರೆ’ ಎಂದು ಹೇಳಿದರು.

‘ಪಕ್ಷ ಸೂಚಿಸಿದರೆ ನೂರಕ್ಕೆ ನೂರು ಕನಕಪುರದಿಂದ ಸ್ಪರ್ಧೆ ಮಾಡುತ್ತೇನೆ?’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಹಳೇ ಮೈಸೂರು ಭಾಗದ ಅನೇಕ ಮುಖಂಡರು ಬಿಜೆಪಿ ಸೇರ್ಪಡೆಗೆ ಉತ್ಸಾಹ ತೋರಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಟರಿಗೂ ಮಾಹಿತಿ ನೀಡಿದ್ದೇನೆ. ಅವರು ಅನುಮತಿ ನೀಡಿದರೆ ಅವರನ್ನೆಲ್ಲ ಪಕ್ಷಕ್ಕೆ ಕರೆತರುತ್ತೇನೆ ಎಂದರು. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ದೆವು. ಆದರೆ ಮತದಾರರು ವೈಯಕ್ತಿಕ ನಿಲುವಿನ ಆಧಾರದಲ್ಲಿ ಮತದಾನ ಮಾಡಿದ ಕಾರಣ ಹಿನ್ನಡೆ ಆಗಿದೆ ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು