News Karnataka Kannada
Sunday, April 28 2024
ರಾಮನಗರ

ಬಿಟ್ ಕಾಯಿನ್ ಬಗ್ಗೆ ಅಗತ್ಯ ದಾಖಲೆ ಇದ್ದರೆ‌ ವಿರೋಧ ಪಕ್ಷ ಒದಗಿಸಲಿ : ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ

Dcm Ashwath Narayan
Photo Credit :

ರಾಮನಗರ: ಬಿಟ್ ಕಾಯಿನ್ ವಿಚಾರದಲ್ಲಿ‌ ರಾಜ್ಯ ಸರ್ಕಾರ ಎಲ್ಲ ರೀತಿಯ ತನಿಖೆಗೆ ಸಿದ್ಧವಿದೆ. ವಿರೋಧ ಪಕ್ಷಗಳು ಅಗತ್ಯ ದಾಖಲೆ ಇದ್ದರೆ‌ ಒದಗಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಮಾಗಡಿಯಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು‌.

ಮುಖ್ಯಮಂತ್ರಿ ಬೊಮ್ಮಾಯಿ ರಾಜ್ಯದ ಪ್ರತಿನಿಧಿಯಾಗಿ ಪ್ರಧಾನಿ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ‌ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಸುದ್ದಿ ಎಲ್ಲವೂ ಬರೀ ಊಹಾಪೋಹ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರತಿಪಕ್ಷದ ಹಲವು ನಾಯಕರ ಮೇಲೂ ಆರೋಪಗಳಿವೆ. ಹಿಂದಿನ ಸರ್ಕಾರದಲ್ಲಿ ತನಿಖೆಗಳು ಹೇಗೆ‌ ನಡೆದವು ಎಂಬುದು ಗೊತ್ತಿದೆ. ಪ್ರತಿಪಕ್ಷದವರಿಗೆ ಕನ್ನಡಿ ಹಿಡಿಯುವ ಕೆಲಸವನ್ನು‌ ನಾವು ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು