ರಾಮನಗರ: ಬಿಟ್ ಕಾಯಿನ್ ವಿಚಾರದಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ತನಿಖೆಗೆ ಸಿದ್ಧವಿದೆ. ವಿರೋಧ ಪಕ್ಷಗಳು ಅಗತ್ಯ ದಾಖಲೆ ಇದ್ದರೆ ಒದಗಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಮಾಗಡಿಯಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು.
ಮುಖ್ಯಮಂತ್ರಿ ಬೊಮ್ಮಾಯಿ ರಾಜ್ಯದ ಪ್ರತಿನಿಧಿಯಾಗಿ ಪ್ರಧಾನಿ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಸುದ್ದಿ ಎಲ್ಲವೂ ಬರೀ ಊಹಾಪೋಹ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರತಿಪಕ್ಷದ ಹಲವು ನಾಯಕರ ಮೇಲೂ ಆರೋಪಗಳಿವೆ. ಹಿಂದಿನ ಸರ್ಕಾರದಲ್ಲಿ ತನಿಖೆಗಳು ಹೇಗೆ ನಡೆದವು ಎಂಬುದು ಗೊತ್ತಿದೆ. ಪ್ರತಿಪಕ್ಷದವರಿಗೆ ಕನ್ನಡಿ ಹಿಡಿಯುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ತಿರುಗೇಟು ನೀಡಿದರು.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…