Categories: ರಾಮನಗರ

ಮನೆಗೆ ನುಗ್ಗಿ ಆತಂಕ ಸೃಷ್ಟಿಸಿದ ಚಿರತೆ

ರಾಮನಗರ: ನಿರ್ಮಾಣ ಹಂತದಲ್ಲಿದ್ದ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ತಾಲೂಕಿನ ಜಾಲಮಂಗಲ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಗ್ರಾಮದ ನಾಗರಾಜು ರೇವಣ್ಣ ಎಂಬುವರಿಗೆ ಸೇರಿದ ಹೊಸ ಮನೆಯ 1ನೇ ಮಹಡಿಯಲ್ಲಿ ತಡರಾತ್ರಿ ಚಿರತೆ ಬಂದು ಸೇರಿಕೊಂಡಿದೆ. ಚಿರತೆ ಮನೆಯೊಳಗೆ ಹೋಗಿದ್ದನ್ನು ಕಂಡ ಮನೆಯವರು ತಕ್ಷಣವೇ ಕೊಠಡಿಯ ಬಾಗಿಲಿಗೆ ಬೀಗ ಜಡಿದಿದ್ದರು. ನಂತರ ಚಿರತೆ ಕೂಡಿ ಹಾಕಿರುವ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ರಾತ್ರಿಯೆಲ್ಲ ಚಿರತೆ ಸದ್ದು ಮಾಡುತ್ತಿರುವುದನ್ನು ಕೇಳಿಸಿಕೊಂಡ ಅಕ್ಕಪಕ್ಕದ ಮನೆಯರು ಗಾಬರಿಗೊಂಡಿದ್ದರು.

ಭಾನುವಾರ ಬೆಳಿಗ್ಗೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬನ್ನೇರುಘಟ್ಟದಿಂದ ವೈದ್ಯರನ್ನು ಕರೆಯಿಸಿ ಅರವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು. ಸುಮಾರು 5 ವರ್ಷದ ಹೆಣ್ಣು ಚಿರತೆಯ ಆರೋಗ್ಯ ಪರೀಕ್ಷಿಸಿದ ನಂತರ ಅದನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಜಾಲಮಂಗಲ ಗ್ರಾಮದಲ್ಲಿರುವ ಪುರಾತನ ಪ್ರಸಿದ್ಧ ಲಕ್ಷ್ಮಿನಾರಾಯಣ ದೇವಾಲಯದ ಬಳಿ ಊರಿನ ಮಧ್ಯೆ ಇರುವ ಮನೆಯಲ್ಲಿ ಚಿರತೆ ಪ್ರತ್ಯಕ್ಷ ಆಗಿರುವುದು ಗ್ರಾಮಸ್ಥರಲ್ಲಿ ಭಯ ಉಂಟುಮಾಡಿದೆ. ಈ ಹಿಂದೆಯೂ ಚಿರತೆ ಗ್ರಾಮದ ಬೀದಿ ನಾಯಿಗಳು ಹಾಗೂ ಸಾಕು ಪ್ರಾಣಿಗಳನ್ನು ಹಿಡಿದು ತಿಂದು ಹಾಕಿತ್ತು. ಚಿರತೆ ಹಾವಳಿಯ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ಗನ ಸೆಳೆದಿದ್ದರು.

ಜಾಲಮಂಗಲ ಗ್ರಾಮದಲ್ಲಿ ಚಿರತೆ ಸೇರಿಕೊಂಡಿರುವ ಸುದ್ದಿ ಭಾನುವಾರ ಮುಂಜಾನೆ ಸುತ್ತಮುತ್ತಲ ಗ್ರಾಮಗಳಿಗೆ ಕಾಳ್ಗಿಚ್ಚಿನಂತೆ ಹರಡುತ್ತಿದ್ದಂತೆ ಅಧಿಕ ಸಂಖ್ಯೆಯಲ್ಲಿ ಜನರು ಮನೆಯ ಬಳಿ ಜಮಾಯಿಸಿದ್ದರು. ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಕಣ್ಣಾರೆ ಕಂಡು ಕುತೂಹಲ ತಣಿಸಿಕೊಂಡರು.

Swathi MG

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

5 seconds ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

13 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

28 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

50 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago