News Karnataka Kannada
Monday, April 29 2024
ರಾಮನಗರ

ಮಳೆನೀರು ಸರಾಗವಾಗಿ ಹರಿಯುವ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Ramanagara
Photo Credit : News Kannada

ರಾಮನಗರ: ಮಳೆಗಾಲ ಆರಂಭವಾಗಿರುವ ಹಿನ್ನಲೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜೂನ್-ಜುಲೈ ತಿಂಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳು ಇರುವುದರಿಂದ ಪ್ರಕೃತಿ ವಿಕೋಪದಿಂದ ಸಾರ್ವಜನಿಕ ಆಸ್ತಿ-ಪಾಸ್ತಿ, ಮರ-ಗಿಡ, ಜೀವಹಾನಿ, ಹಾನಿಗೊಳಗಾದ ಸಮಸ್ಯೆಗಳನ್ನು ಅಧಿಕಾರಿಗಳು ತಮ್ಮ ಹಂತದಲ್ಲಿಯೇ ಬಗೆಹರಿಸಿಕೊಳ್ಳಬೇಕು.

ಜಿಲ್ಲೆಯಲ್ಲಿ ತಕ್ಷಣ ಸಹಾಯವಾಣಿ ಆರಂಭಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನೀರು ಹೊಕ್ಕದಂತೆ ನೋಡಿಕೊಳ್ಳುವುದರ ಜೊತೆಗೆ ಅಗತ್ಯ ಕ್ರಮ ವಹಿಸಬೇಕು. ಪ್ರಕೃತಿ ವಿಕೋಪದಲ್ಲಿ ನಿವೇಶನ ಕಳೆದುಕೊಂಡವರನ್ನು ಕಾಳಜಿ ಕೇಂದ್ರಗಳಿಗೆ ವರ್ಗಾಹಿಸಿ ಪೋಷಿಸಬೇಕು ಎಂದರು. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಜನರಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಜವರೇಗೌಡ.ಟಿ ಅವರು ಮಾತನಾಡಿ ಮಳೆಹಾನಿ ಜೀವಹಾನಿ ಆಗದಂತೆ ಮುಂಜಾಗ್ರತ ಕ್ರಮವಹಿಸಬೇಕು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಕೆರೆ ಒಡೆದು ಗ್ರಾಮಗಳು ಮುಳುಗಡೆಯಾಗದಂತೆ ಗಮನಹರಿಸಬೇಕು, ಮಳೆ ನೀರು ಯಾವುದೇ ಅಡೆ-ತಡೆಗಳಿಲ್ಲದೆ ಸರಾಗವಾಗಿ ಸಾಗುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಸಂದರ್ಭದಲ್ಲಿ ಶಾಲಾ ಕಟ್ಟಡಗಳು ಹಳೆಯದಾಗಿದ್ದರೆ ಮಕ್ಕಳನ್ನು ಬೇರೆ ಕಟ್ಟಡಗಳಿಗೆ ಸ್ಥಳಾಂತರ ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು, ಸಿಇಒ ಇಕ್ರಮ್ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು